ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಜ್ವರದ ಹಿನ್ನೆಲೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರ ಮೇಲೆ ನಿಗಾವಹಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಸೋನಿಯಾ ಗಾಂಧಿ ಅವರು 2 ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ವೈರಲ್ ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ಜನವರಿ 12ರಂದು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಜನವರಿ 17ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಮಾರ್ಚ್ 2ರಂದು ಜ್ವರದ ಕಾರಣ ಮತ್ತೆ ಇದೇ ಆಸ್ಪತ್ರೆಗೆ ದಾಖಲಾಗಿದ್ದರು.