ಹೊಸಪೇಟೆ: ವಿಜಯನಗರ ಜಿಲ್ಲಾ ವ್ಯಾಪ್ತಿಯ ಹಿಂದುಳಿದ ವರ್ಗಕ್ಕೆ ಸೇರಿದ ಕಾನೂನು ಪದವಿಧರರಿಗೆ 2023-24ನೇ ಸಾಲಿನ ಕಾನೂನು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ.ಬಿ.ರಾಮಚಂದ್ರಪ್ಪ ಅವರು ತಿಳಿಸಿದ್ದಾರೆ.
ಸೆ.15 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಹಿಂದುಳಿದ ವರ್ಗಕ್ಕೆ ಸೇರಿದ ಕಾನೂನು ಪದವಿ ಪಡೆದ 38 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರವರ್ಗ-1ರ ಅಭ್ಯರ್ಥಿಗಳ ಪೋಷಕರ ಆದಾಯ 3.50 ಹಾಗೂ ಪ್ರವರ್ಗ-2ಎ, 3ಎ ಮತ್ತು 3ಬಿ 2.50 ಲಕ್ಷ ಮೀರಿರಬಾರದು. ಜಿಲ್ಲಾ ವ್ಯಾಪ್ತಿಯಲ್ಲಿರುವ, ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 2 ವರ್ಷದೊಳಗೆ ಕಾನೂನು ಪದವಿ ಪಡೆದು ಕರ್ನಾಟಕ ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿಸಿರಬೇಕು, ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ, ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗಾವಣೆ ಪ್ರಮಾಣ ಪತ್ರ ಮತ್ತು ಪದವಿ ಹಾಗೂ ಕಾನೂನು ಪದವಿಗಳಲ್ಲಿ ಪಡೆದ ಅಂಕಪಟ್ಟಿ ಪ್ರಮಾಣ ಪತ್ರದ ದೃಢೀಕರಣ ಪ್ರತಿಗಳನ್ನು ಲಗತ್ತಿಸಬೇಕು.
ಆಸಕ್ತ, ಅರ್ಹ ಅಭ್ಯರ್ಥಿಗಳು https://zpvijayanagara.karnataka.gov.in ಮೂಲಕ ಹಿಂದುಳಿದ ವರ್ಗಗಳ ಕಾನೂನು ಪದವೀಧರ ಶಿಷ್ಯವೇತನಕ್ಕೆ ಅರ್ಜಿ ಅರ್ಜಿ ನಮೂನೆಯನ್ನು ಪಡೆಯಬಹುದಾಗಿದೆ.
ಮಾಹಿತಿಗಾಗಿ ನಗರದ 35ನೇ ವಾರ್ಡ್ ಆಕಾಶವಾಣಿ ಹತ್ತಿರದ ಪುಣ್ಯಾನಂದಪುರಿ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು.