ಗಣಪತಿ ಮಂಟಪದ ಮುಂದೆ ಡ್ಯಾನ್ಸ್ ವೇಳೆ ಕುಸಿದು ಬಿದ್ದು ಯುವಕ ಮೃತ್ಯು

ಗಣೇಶ ಮಂಟಪದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆಯೇ ಯುವಕನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಪಟ್ಟಣದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ವೈರಲ್ ಆದ ವಿಡಿಯೋದಲ್ಲಿ ಗಣೇಶೋತ್ಸವದ ಸಂಭ್ರಮದಲ್ಲಿ ಯುವಕರಿಬ್ಬರು ಕುಣಿದು ಕುಪ್ಪಳಿಸುವುದು ಕಂಡು ಬರುತ್ತಿದೆ. ಅವರು ಡ್ಯಾನ್ಸ್ ಮಾಡುವಾಗ ಇದ್ದಕ್ಕಿದ್ದ ಹಾಗೆ ಒಬ್ಬ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

ಕಳೆದ ಬುಧವಾರ (ಸೆಪ್ಟೆಂಬರ್ 20) ರಾತ್ರಿ ಮಾರುತಿ ನಗರದ ವಿನಾಯಕ ಮಂಟಪದ (ಪಂದಳ) ಮುಂಭಾಗದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮೃತ ಯುವಕನನ್ನು 26 ವರ್ಷದ ಪ್ರಸಾದ್ ಎಂದು ಗುರುತಿಸಲಾಗಿದೆ.

Advertisement

ಮೃತ ಪ್ರಸಾದ್ ನೃತ್ಯ ಮಾಡುವಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement