ನವದೆಹಲಿ: ಬಾಲಿವುಡ್ ಚಿತ್ರರಂಗದ ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕ ಪ್ರಶಸ್ತಿ ನೀಡಲಾಗುವುದೆಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿನ ಅನುರಾಗ್ ಠಾಕೂರ್ ಅವರು ಟ್ವಿಟರ್ ನಲ್ಲಿ ಘೋಷಿಸಿದ್ದಾರೆ.
ವಹೀದಾ ರೆಹಮಾನ್ ಅವರಿಗೆ ಭಾರತೀಯ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ ಈ ವರ್ಷ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆಗಾಗಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಘೋಷಿಸಲು ನಾನು ಅಪಾರ ಸಂತೋಷವಾಗುತ್ತಿದೆ ಎಂದು ಅವರು ಬರೆದುಕೊಂಡಿದ್ದಾರೆ.
ಕಳೆದ 5 ದಶಕಗಳಲ್ಲಿ ಭಾರತೀಯ ಸಿನಿಮಾಲೋಕದಲ್ಲಿ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.ಪ್ಯಾಸಾ , ಕಾಗಜ್ ಕೆ ಫೂಲ್, ಚೌಧವಿ ಕಾ ಚಾಂದ್, ಸಾಹೇಬ್ ಬೀವಿ ಔರ್ ಗುಲಾಮ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.ರೇಷ್ಮಾʼ ಮತ್ತು ʼಶೇರಾʼ ಚಿತ್ರದಲ್ಲಿನ ಅವರ ಅಭಿನಯಕ್ಕೆ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ.
ಇದಲ್ಲದೆ ಅವರು ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಬಣ್ಣದ ಲೋಕ್ಕೆ ಕಾಲಿಟ್ಟ ವಹೀದಾ ಮೊದಲು ತಮಿಳು ಸಿನಿಮಾವನ್ನು ಮಾಡಿ ಆ ಬಳಿಕ ಬಾಲಿವುಡ್ ಸಿನಿಮಾರಂಗಕ್ಕೆ ಕಾಲಿಟ್ಟರು.
ಬಾಲಿವುಡ್ ರಾಜೇಶ್ ಖನ್ನಾ, ರಾಜ್ ಕಪೂರ್, ಅಮಿತಾಭ್ ಸೇರಿದಂತೆ ಬಹುತೇಕ ದಿಗ್ಗಜ ನಟರೊಂದಿಗೆ ಅವರು ತೆರೆ ಹಂಚಿಕೊಂಡಿದ್ದಾರೆ.