ನವದೆಹಲಿ: ಚೀನಾದಿಂದ ಹಣ ಹೂಡಿಕೆ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್ಕ್ಲಿಕ್ ಡಿಜಿಟಲ್ ಮಾಧ್ಯಮ ಸಂಸ್ಥೆ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರು ದಾಳಿ ನಡೆಸಿದ್ದಾರೆ.
ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ನ್ಯೂಸ್ಕ್ಲಿಕ್ನ 30ಕ್ಕೂ ಅಧಿಕ ಪತ್ರಕರ್ತರ ನಿವಾಸಗಳ ಮೇಲೆ ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಚೀನಾದಿಂದ ಹಣ ಹೂಡಿಕೆಗೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯವು ನ್ಯೂಸ್ಕ್ಲಿಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ. ಇದರ ಬೆನ್ನಲ್ಲೇ, ನ್ಯೂಸ್ಕ್ಲಿಕ್ನ ಹಲವು ಪತ್ರಕರ್ತರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಖಲೆ ಪರಿಶೀಲನೆಯಷ್ಟೇ ಮಾಡಲಾಗಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿದೆ.