ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ: ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಸಲೀಂ ಅಹ್ಮದ್

ಧಾರವಾಡ: ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಪುನರ್‌ರಚನೆ ವಿಚಾರಕ್ಕೆ ಪರಿಷತ್​ ಮುಖ್ಯ ಸಚೇತಕ ಸಲೀಂ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಚರ್ಚೆ ಸೂಕ್ತವಲ್ಲ ಎಂದು ಹೇಳಿದ್ದಾರೆ. ಮುಖಂಡರು, ಶಾಸಕರು ಚರ್ಚಿಸಬೇಡಿ ಎಂದಿದ್ದಾರೆ. ಸಮಯ, ಸಂದರ್ಭ ಬಂದಾಗ ವರಿಷ್ಠರು ಹೇಳುತ್ತಾರೆ ಎಂದರು.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ವಿಚಾರದ ಬಗ್ಗೆ ಮಾತನಾಡಿ, ಈಗಾಗಲೇ 28 ಲೋಕಸಭಾ ವೀಕ್ಷಕರ ನೇಮಕವಾಗಿದೆ. ಎಲ್ಲ ಜಿಲ್ಲೆಗಳಲ್ಲಿ ವೀಕ್ಷಕರು ಸಭೆಗಳನ್ನು ಮಾಡುತ್ತಿದ್ದಾರೆ. ಶಾಸಕರು, ಮಾಜಿ ಶಾಸಕರು, ಬ್ಲಾಕ್ ಅಧ್ಯಕ್ಷರು ಹಾಗು ಕಾರ್ಯಕರ್ತರನ್ನು ಮಾತನಾಡಿಸಿದ್ದಾರೆ. ನಂತರ ಒಂದು ಪ್ಯಾನಲ್ ಮಾಡುತ್ತಾರೆ. ಹತ್ತು ದಿನಗಳಲ್ಲಿ ಮಹತ್ವದ ಸಭೆ ಆಗುತ್ತದೆ. ಎಲ್ಲ ವೀಕ್ಷಕರು, ಸಚಿವರು ಮತ್ತು ಕೆಪಿಸಿಸಿ ಅಧ್ಯಕ್ಷರ ಜತೆ ಸಭೆ ಮಾಡುತ್ತಾರೆ. ಈ ಸಭೆಯ ಬಳಿಕ ಕೆಪಿಸಿಸಿ ಅಧ್ಯಕ್ಷರು, ಸಿಎಂ, ವರಿಷ್ಠರಿಗೆ ಪಟ್ಟಿ ರವಾನೆ ಮಾಡುತ್ತಾರೆ. ಜನವರಿ ಮೊದಲ ವಾರದಲ್ಲಿ ಪಟ್ಟಿ ಬಿಡುಗಡೆ ಆಗುತ್ತದೆ ಎಂದು ತಿಳಿಸಿದರು. ವಿನಯ ಕುಲಕರ್ಣಿ ಹೇಳಿಕೆ ವಿಚಾರ: ಪಕ್ಷದಲ್ಲಿ ಅಂತಿಮ ತೀರ್ಮಾನ ವರಿಷ್ಠರದ್ದು. ಯಾರು ಮಂತ್ರಿ ಇರಬೇಕು, ಯಾರಿಗೆ ಬೇರೆ ಅಧಿಕಾರ ಸಿಗಬೇಕು ಎಂಬುದನ್ನು ವರಿಷ್ಠರೇ ತೀರ್ಮಾನ ಮಾಡುತ್ತಾರೆ. ಈಗಾಗಲೇ ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಇದ್ದಾರೆ. ಮಂತ್ರಿ ಮಂಡಲ ಈಗ ಪೂರ್ಣ ಆಗಿದೆ. ಸದ್ಯಕ್ಕೆ ಅದರ ಬಗ್ಗೆ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಸತೀಶ್ ಜಾರಕಿಹೊಳಿ ಅವರು ಶಾಸಕರೊಂದಿಗಿನ ಟ್ರಿಪ್‌ ಪ್ಲ್ಯಾನ್​ ವಿಚಾರಕ್ಕೆ ಪ್ರತಿಕ್ರಿಯಿಸಿ, ಎರಡು ವರ್ಷ ಕೊರೊನಾ ಇತ್ತು. ದಸರಾ ಸಂಭ್ರಮ ಇರಲಿಲ್ಲ. ಈ ಸಲ ನಮ್ಮ ಸರ್ಕಾರವೂ ಬಂದಿದೆ. ಹೀಗಾಗಿ ಅವರು ದಸರಾ ನೋಡಲು ಹೊರಟಿದ್ದರು. ಸದ್ಯಕ್ಕೆ ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ಎಂದು ಊಹಾಪೋಹಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು. ಬಿಜೆಪಿ ಮತ್ತು ಜೆಡಿಎಸ್‌ನಿಂದ ಸಾಕಷ್ಟು ಜನ ಕಾಂಗ್ರೆಸ್‌ಗೆ ಬರಲಿದ್ದಾರೆ. ಈಗಾಗಲೇ ಬಿಜೆಪಿ-ಜೆಡಿಎಸ್ ಅನೇಕ ಮುಖಂಡರು ಕಾಂಗ್ರೆಸ್ ಸೇರ ಬಯಸಿದ್ದಾರೆ. ಅದರಲ್ಲಿ ಅನೇಕ ಶಾಸಕರೂ ಇದ್ದಾರೆ. ಆದರೆ ಯಾರನ್ನು ಕರೆದುಕೊಳ್ಳಬೇಕು ಅಂತಾ ವರಿಷ್ಠರು ಅಂತಿಮ ತೀರ್ಮಾನ ಮಾಡುತ್ತಾರೆ. ಬೇರೆ ಪಕ್ಷದವರು ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬರುತ್ತಿದ್ದಾರೆ. ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ. ಅದರ ಅನಿವಾರ್ಯವೂ ನಮಗೆ ಇಲ್ಲ. ಜನ ನಮಗೆ 136 ಎಂಎಲ್‌ಎ ಕೊಟ್ಟಿದ್ದಾರೆ. ಆದರೆ ಬಿಜೆಪಿಯಲ್ಲಿ ಅನೇಕರು ನೊಂದಿದ್ದಾರೆ. ಅವರಾಗಿಯೇ ಬರಲು ಮುಂದಾಗಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡುವ ಶಕ್ತಿಯನ್ನೂ ಸಹ ಬಿಜೆಪಿ ಕಳೆದುಕೊಂಡಿದೆ ಎಂದು ಇದೇ ವೇಳೆ ಟೀಕಿಸಿದರು.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement