ಬೆಂಗಳೂರು: ರಾಜ್ಯದಲ್ಲಿ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಐಸಿಸಿ ಪ್ರಕಟಿಸಿದೆ.
ಬೆಂಗಳೂರು ಪದವೀಧರರ ಶಿಕ್ಷಕರ ಕ್ಷೇತ್ರಕ್ಕೆ ರಾಮೋಜಿಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ. ಮಂಜುನಾಥ್ ಹೆಸರು ಅಧಿಕೃತಗೊಳಿಸಿದೆ. ಆಗ್ನೆಯ ಶಿಕ್ಷಕರ ಕ್ಷೇತ್ರ ಟಿ.ಡಿ. ಶ್ರೀನಿವಾಸ್, ಈಶಾನ್ಯ ಪದವೀಧರ ಕ್ಷೇತ್ರ ಡಾ. ಚಂದ್ರಶೇಖರ್ ಪಾಟೀಲ್‌ಗೆ ಟಿಕೆಟ್ ನೀಡಿದೆ.
































