ಕಠ್ಮಂಡು: ನೇಪಾಳದ ಪಶ್ಚಿಮ ಭಾಗದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಸುಮಾರು 128ಕ್ಕೂ ಅಧಿಕ ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶುಕ್ರವಾರ ತಡರಾತ್ರಿ ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು 10 ಕಿ.ಮೀ ಆಳದಲ್ಲಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ರುಕುಮ್ ವೆಸ್ಟ್ನಲ್ಲಿ ಕನಿಷ್ಠ 36 ಜನರು ಹಾಗೂ ಜಾಜರ್ಕೋಟ್ನಲ್ಲಿ 34 ಮಂದಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ’ ಎಂದು ರುಕುಮ್ ವೆಸ್ಟ್ನ ಜಿಲ್ಲಾಧಿಕಾರಿ ಹರಿ ಪ್ರಸಾದ್ ಪಂತ್ ತಿಳಿಸಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿ ಬರಬೇಕಿದೆ.!