ನವೆಂಬರ್ 5 ರಂದು ಎಂ. ಜಿ. ರಸ್ತೆ ಹಾಗೂ ಬೈಯಪ್ಪನಹಳ್ಳಿ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು – ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಸ್ಥಗಿತವಾಗಲಿದೆ.ನೇರಳೆ ಮಾರ್ಗದ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತೆ. ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಗೆ ಬದಲಾಗಿ 9 ಗಂಟೆಗೆ ಪ್ರಾರಂಭವಾಗಲಿದೆ. ಬೆಳಗ್ಗೆ 9 ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಎಂದಿನಂತೆ ಪ್ರಯಾಣ ನಡೆಯಲಿದೆ.ಚಲ್ಲಘಟ್ಟ ಮತ್ತು ಎಂ.ಜಿ. ರಸ್ತೆ, ಬೈಯಪ್ಪನಹಳ್ಳಿ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವಿನ ಮಾರ್ಗಗಳಲ್ಲಿ ರೈಲು ಸೇವೆ ಬೆಳಗ್ಗೆ 7 ಗಂಟೆಯಿಂದಲೇ ವೇಳಾಪಟ್ಟಿ ಪ್ರಕಾರ ಇರಲಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement