ಡಿ.4ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ.!

 

ಬೆಂಗಳೂರು; ಡಿ. 4ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ ನಡೆಯಲಿದೆ ಎಂದು ವಿಪ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಬೆಳಗಾವಿಯಲ್ಲಿ ಸ್ಪೀಕರ್ ಯು.ಟಿ ಖಾದರ್ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನೌಪಚಾರಿಕವಾಗಿ ಡಿ.4ರಿಂದ ಈ ಅಧಿವೇಶನ ನಡೆಯಲಿದ್ದು, ಆದರೆ ಸರ್ಕಾರ ಅಧಿಕೃತ ದಿನಾಂಕ ತಿಳಿಸಿಲ್ಲ ಎಂದರು.

Advertisement

10 ದಿನ ನಡೆಯುವ ಈ ಅಧಿವೇಶನಕ್ಕೆ ಸಿದ್ಧತೆ ನಡೆಸಲಾಗಿದ್ದು, ಈ ಬಾರಿ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆಯೆಂದು ಹೇಳಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement