ಮುಂಬೈ:  ಭೀಕರ ಸರಣಿ ಅಪಘಾತ: 3 ಸಾವು, 6 ಜನರಿಗೆ ಗಾಯ

 

ಮುಂಬೈ: ವೇಗವಾಗಿ ಬಂದ ಕಾರೊಂದು ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಮೃತಪಟ್ಟು ಆರು ಮಂದಿ ಗಾಯಗೊಂಡಿರುವ ಘಟನೆ ಮುಂಬೈನ ಟೋಲ್ ಪ್ಲಾಜಾದಲ್ಲಿ ಸಂಭವಿಸಿದೆ.

ಗುರುವಾರ ರಾತ್ರಿ ಕಾರು ವರ್ಲಿಯಿಂದ ಬಾಂದ್ರಾ ಕಡೆಗೆ ಅತೀ ವೇಗವಾಗಿ ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೇಗವಾಗಿ ಬಂದ ಇನ್ನೋವಾ ಕಾರು ಮೊದಲು ಮರ್ಸಿಡಿಸ್ ಕಾರಿಗೆ ಡಿಕ್ಕಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಲ್ಲಿಂದ ಮುಂದುವರೆದ ಕಾರು ಟೋಲ್ ಪ್ಲಾಜಾ ಬಳಿ ನಿಂತಿದ್ದ ಮೂರು ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದು ನಿಂತಿದೆ ಎಂದು ಡಿಸಿಪಿ ಕೃಷ್ಣಕಾಂತ್ ಉಪಾಧ್ಯಾಯ ಹೇಳಿದ್ದಾರೆ.

Advertisement

ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಸ್ಥಿರವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡವರಲ್ಲಿ ಒಬ್ಬರು ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಇತರ ಐವರನ್ನು ಭಾಭಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಪಘಾತದ ತೀವ್ರತೆಗೆ ಕಾರುಗಳು ನುಜ್ಜುಗುಜ್ಜಾಗಿದ್ದು ಇನ್ನೋವಾ ಕಾರು ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಅರೋಗ್ಯ ಸುಧಾರಿಸಿದ ಬಳಿಕ ಆತನನ್ನು ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement