ಇಸ್ರೋ ಅಧ್ಯಕ್ಷರಿಗೆ ‘ಅನುಭವ ಮಂಟಪ’ ಪ್ರಶಸ್ತಿ

ಬಸವಕಲ್ಯಾಣ (ಬೀದರ್‌ ಜಿಲ್ಲೆ): ಇಸ್ರೋ ಅಧ್ಯಕ್ಷ ಎಸ್.ಸೋಮನಾಥ ಅವರು ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿಯಿಂದ ನೀಡುವ ರಾಷ್ಟ್ರೀಯ ‘ಅನುಭವ ಮಂಟಪ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ‘ಸೋಮನಾಥ ಅವರ ನೇತೃತ್ವದಲ್ಲಿ ಚಂದ್ರಯಾನ-3 ಯಶಸ್ವಿಯಾಗಿದ್ದು, ದೇಶದ ಕೀರ್ತಿ ಹೆಚ್ಚಿದೆ. ಆದಕಾರಣ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ವಿಶ್ವಸ್ಥ ಮಂಡಳಿ ಅಧ್ಯಕ್ಷ ಭಾಲ್ಕಿ ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಸಾಲಿನಿಂದ ಈ ಪ್ರಶಸ್ತಿ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ನವೆಂಬರ್ 25ರಂದು ಬಸವಕಲ್ಯಾಣದಲ್ಲಿ ನಡೆಯಲಿರುವ ‘ಅನುಭವ ಮಂಟಪ ಉತ್ಸವ’ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದು ಮಂಡಳಿ ಕಾರ್ಯದರ್ಶಿ ಡಾ.ಎಸ್.ಬಿ.ದುರ್ಗೆ ಶುಕ್ರವಾರ ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement