ಬೆಂಗಳೂರು: ಮಾಜಿ ಸಚಿವ ಆರ್. ಅಶೋಕ್ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಸಂಬಂಧ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯಾಧ್ಯಕ್ಷ ಸ್ಥಾನವನ್ನು ಲಿಂಗಾಯಿತ ಸಮುದಾಯಕ್ಕೆ ನೀಡಿದ್ದರಿಂದ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಒಕ್ಕಲಿಗರಿಗೆ ಕೊಡಬೇಕು ಎಂಬ ಕೂಗು ಕೇಳಿಬಂದಿತ್ತು. ಈಗ ಒಕ್ಕಲಿಗರಿಗೆ ವಿಪಕ್ಷ ನಾಯಕನಿಗೆ ದಕ್ಕಿದೆ.
 
				 
         
         
         
															 
                     
                     
                     
                     
                    


































 
    
    
        