ಶಿವಣ್ಣ ನಟನೆಯ ‘ಘೋಸ್ಟ್’ ಒಟಿಟಿಗೆ; ಬರೋಬ್ಬರಿ 10,000 ಅಡಿ ಪೋಸ್ಟರ್ ಲಾಂಚ್ ಮಾಡಿ ದಾಖಲೆ ನಿರ್ಮಿಸಿದ ಜೀ5

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಒಟಿಟಿ ವ್ಯಾಪ್ತಿ ಹಿರಿದಾಗಿದ್ದು ಅನೇಕರು ಈ ವೇದಿಕೆಗೆ ಬರುತ್ತಿದ್ದಾರೆ. ಇದೇ ಮಾದರಿಗೆ ಜೀ5 ಕೂಡ ಸೇರ್ಪಡೆಗೊಳ್ಳುತ್ತಿದ್ದು ಕನ್ನಡದ ಹಲವು ಸಿನಿಮಾಗಳು ರಿಲೀಸ್ ಈ ZEE5 ವೇದಿಕೆಯಲ್ಲಿ ಬಿಡುಗಡೆಗೊಳ್ಳುತ್ತಿದ್ದು. ಕನ್ನಡದ ಹ್ಯಾಟ್ರೀಕ್ ಹೀರೋ ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಕೂಡ ZEE5 ನಲ್ಲಿ ಬಿಡುಗಡೆಯಾಗಿ ಅಪಾರ ಮೆಚ್ಚುಗೆ ಪಡೆಯುತ್ತಿದೆ.

ಶಿವರಾಜ್​ಕುಮಾರ್ ನಟನೆಯ, ಶ್ರೀನಿ ನಿರ್ದೇಶನದ ‘ಘೋಸ್ಟ್’ ಥಿಯೇಟರ್​ನಲ್ಲಿ ಭರ್ಜರಿ ಸದ್ದು ಮಾಡಿತ್ತು. ಇದೀಗ ಒಟಿಟಿಗೆ ಕಾಲಿಟ್ಟಿದೆ. ನವೆಂಬರ್ 17ರಂದು ಜೀ5 ನಲ್ಲಿ ಬಿಡುಗಡೆ ಆಗಿದ್ದು ಚಿತ್ರಕ್ಕೆ ಪ್ರೇಕ್ಷಕನ್ನ ಸೆಳೆಯಲು ಜೀ5 ಕಡೆಯಿಂದ ಹೊಸ ಪ್ರಯತ್ನ ಮಾಡಲಾಗಿದೆ. ಬರೋಬ್ಬರಿ 10 ಸಾವಿರ ಅಡಿಯ ‘ಘೋಸ್ಟ್’ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದ ಪ್ರಚಾರಕ್ಕೆ ಇಷ್ಟು ದೊಡ್ಡ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಥಿಯೇಟರ್‌ಗಳಲ್ಲಿ ರಿಲೀಸ್ ಆಗುವ ಚಿತ್ರಗಳಿಗೆ ಬ್ಯಾನರ್, ಪೋಸ್ಟರ್ ಹಾಕುವುದು ಸಹಜ. ಆದರೆ, ಈ ಬಾರಿ ಒಟಿಟಿ ರಿಲೀಸ್‌ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಲಾಗಿದೆ. ಬೆಂಗಳೂರಿನ ಜಯನಗರದ ಎಂಇಎಸ್ ಗ್ರೌಂಡ್​ನಲ್ಲಿ ಘೋಸ್ಟ್ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ.‘ಘೋಸ್ಟ್’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಎರಡು ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂದೇಶ್​ ಪ್ರೊಡಕ್ಷನ್ಸ್ ಬ್ಯಾನರ್‌ ಅಡಿಯಲ್ಲಿ ‘ಘೋಸ್ಟ್’ ಸಿನಿಮಾ ಸಿದ್ಧವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರದಲ್ಲಿ ಬಿಡುಗಡೆ ಆಗಿದೆ. ಅರ್ಜುನ್‌ ಜನ್ಯಾ ಸಂಗೀತ ಸಂಯೋಜನೆ ಇದೆ. ಜಯರಾಮ್‌, ಅನುಪಮ್‌ ಖೇರ್‌, ಅರ್ಚನಾ ಜೋಯಿಸ್‌, ಸತ್ಯಪ್ರಕಾಶ್‌ ಮೊದಲಾದವರು ನಟಿಸಿದ್ದಾರೆ. ಥಿಯೇಟರ್​ನಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು, ಥಿಯೇಟರ್​ನಲ್ಲಿ ಒಮ್ಮೆ ನೋಡಿ ಮತ್ತೊಮ್ಮೆ ವೀಕ್ಷಿಸಬೇಕು ಎಂದುಕೊಂಡವರು ‘ಘೋಸ್ಟ್’ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement