ಪ್ರತಿ ತಿಂಗಳು 20 ರಿಂದ 30ನೇ ತಾರೀಖಿನೊಳಗೆ ಹಣ ಜಮೆಯಾಗಲಿದೆ. ಹೀಗಾಗಿ ಮುಂದಿನ ವಾರದಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರು ತಕ್ಷಣ ಗ್ರಾಮ ಪಂಚಾಯತ್ ಅಧಿಕಾರಿಗಳು, ಅಂಗನವಾಡಿ ಶಿಕ್ಷಕಿಯರನ್ನು ಸಂಪರ್ಕಿಸಬಹುದಾಗಿದೆ. ಇದುವರೆಗೆ ಯಾರಿಗೆ ಹಣ ಬಂದಿಲ್ಲ, ಅಂತಹವರಿಗೆ ಡಿಸೆಂಬರ್ ತಿಂಗಳೊಳಗೆ ಹಣ ಜಮಾ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಯಾರಿಗೆಲ್ಲಾ ಹಣ ಬಂದಿಲ್ಲವೋ ಅವರಿಗೆ ಡಿಸೆಂಬರ್ ಒಳಗೆ ಹಣ ಹಾಕುವ ವ್ಯವಸ್ಥೆ ಮಾಡಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
![](https://bcsuddi.com/wp-content/uploads/2025/02/wd.jpg)