ನವದೆಹಲಿ: ಮೂರು ಹೊಸ ಕ್ರಿಮಿನಲ್ ಕಾನೂನು ಮಸೂದೆಗಳಿಗೆ ಇಂದು ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರ ದೊರೆತಿವೆ.
ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ 2023 ಎಂಬ ಹೊಸ ಮಸೂದೆಗಳಿಗೆ ಅಂಗೀಕಾರ ಸಿಕ್ಕಿದೆ. ಇನ್ನು ಭಾರತೀಯ ದಂಡ ಸಂಹಿತೆ 1860, ಕ್ರಿಮಿನಲ್ ಪ್ರೊಸೀಜರ್ 1973 ಹಾಗೂ ಇಂಡಿಯನ್ ಎವಿಡೆನ್ಸ್ ಆಕ್ಟ್ 1872 ಎಂಬ ಮಸೂದೆಗಳ ಬದಲಿಗೆ ಈ ಹೊಸ ಮಸೂದೆಗಳನ್ನು ಮಂಡಿಸಲಾಗಿದೆ.
ಮಸೂದೆಗಳ ಕುರಿತ ಪ್ರಶ್ನೆಗಳಿಗೆ ಉತ್ತರಿದ ಅಮಿತ್ ಶಾ ಅವರು, ಹೊಸ ಮಸೂದೆಗಳು ಭಾರತೀಯತೆ, ಭಾರತೀಯ ಸಂವಿಧಾನ ಮತ್ತು ಜನರ ಯೋಗಕ್ಷೇಮಕ್ಕೆ ಒತ್ತು ನೀಡುತ್ತೇವೆ ಎಂದು ತಿಳಿಸಿದ್ದಾರೆ.