ಚಿತ್ರದುರ್ಗ: ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳಲ್ಲಿ ರೈತ ಉತ್ಪಾದಕ ಸಂಸ್ಥೆ (ಎಫ್.ಪಿ.ಒ)ಗಳು ಪಡೆದ ರೂ.20 ಲಕ್ಷದವರೆಗಿನ ಸಾಲಕ್ಕೆ ಶೇ.4 ರಷ್ಟು ಬಡ್ಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಲು ಮಾರುಕಟ್ಟೆ ಸಂಪರ್ಕ, ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ/ಮೌಲ್ಯವರ್ಧನೆ ಮತ್ತು ವಿವಿಧ ತಂತ್ರಜ್ಞಾನಗಳನ್ನು ಅಡಳವಡಿಕೆ, ನಷ್ಟ ಕಡಿಮೆಗೊಳಿಸಿ ಆದಾಯ ವೃದ್ಧಿಗೊಳಿಸಲು, ಮೌಲ್ಯ ಸರಪಳಿ ಪ್ರೇರೇಪಿಸುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಮಗ್ರ ಸುಧಾರಣೆಗಾಗಿ ಯೋಜನೆಯನ್ನು ಜಾರಿ ಮಾಡಲಾಗಿದೆ.
ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ರೇಷ್ಮೆ ಹಾಗೂ ಕೈಮಗ್ಗ ಮತ್ತು ಜವಳಿ ಉತ್ಪನ್ನಗಳನ್ನು ಸಂಸ್ಕರಣೆ, ಮೌಲ್ಯವರ್ಧಿತ ಸಂಸ್ಕರಣೆಯಲ್ಲಿ ತೊಡಗಿರುವ ರೈತ ಉತ್ಪಾದಕ ಸಂಸ್ಥೆಗಳು ಡಿ.30 ರ ಸಂಜೆ 4 ಗಂಟೆ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ, ತಾಲ್ಲೂಕ ಮಟ್ಟದ ಕೃಷಿ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವAತೆ ಪ್ರಕಟಣೆಯಲ್ಲಿ ತಿಳಿಸಿದೆ.