ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ

ನವದೆಹಲಿ: ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ರಚಿಸಲಾದ 26 ಪಕ್ಷಗಳ ಮೈತ್ರಿಕೂಟದ ಮಹತ್ವದ ಸಭೆ ಶನಿವಾರ ನಡೆಸಲಾಗಿದ್ದು, ಈ ವರ್ಚುವಲ್ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸೀತಾರಾಂ ಯೆಚೂರಿ, ಡಿಎಂಕೆ ನಾಯಕ ಸ್ಟಾಲಿನ್ ಸೇರಿದಂತೆ 14 ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement