ಶಾಲಾ ಬಸ್ – ಟ್ಯಾಕ್ಟರ್ ನಡುವೆ ಅಪಘಾತ; ನಾಲ್ವರು ವಿದ್ಯಾರ್ಥಿಗಳು ಸಾವು

ಬಾಗಲಕೋಟೆ:ಶಾಲಾ ಬಸ್ ಹಾಗೂ ಟ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ಜಿಲ್ಲೆ ಜಮಖಂಡಿ ತಾಲ್ಲೂಕಿನ ಅಲಗೂರು ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಸಾಗರ ಕಡಕೋಳ(17),ಶ್ವೇತಾ (13),ಗೋವಿಂದ(13), ಬಸವರಾಜ (17) ಎಂಬ ವಿದ್ಯಾರ್ಥಿಗಳು ಮೃತಪಟ್ಟಿದ್ದು, 8ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಭಾನುವಾರ ಸ್ನೇಹಿತರೊಟ್ಟಿಗೆ ಕಾರ್ಯಕ್ರಮ ಮುಗಿಸಿಕೊಂಡು ಕವಟಗಿ ಗ್ರಾಮದ ಕಡೆಗೆ ಸ್ಕೂಲ್ ಬಸ್ ಹೊರಟ್ಟಿತ್ತು . ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸದ್ಯ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Advertisement

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement