ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲರು ಪ್ರತಿಜ್ಞಾನ ವಿಧಿ ಭೋಧಿಸಿದರು. ರಾಂಚಿಯ ರಾಜಭವನದಲ್ಲಿ ಜೆಎಂಎಂ ಉಪಾಧ್ಯಕ್ಷ ಚಂಪೈ ಸೊರೆನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬುಧವಾರ ಹೇಮಂತ್ ಸೊರೆನ್ ರಾಜೀನಾಮೆ ನೀಡಿದ ನಂತರ ಮುಖ್ಯಮಂತ್ರಿಗಳಿಲ್ಲದ ರಾಜ್ಯದಲ್ಲಿ “ಗೊಂದಲ” ಇರುವುದರಿಂದ ಸರ್ಕಾರ ರಚಿಸುವ ತಮ್ಮ ಹಕ್ಕನ್ನು ಆದಷ್ಟು ಬೇಗ ಸ್ವೀಕರಿಸುವಂತೆ ರಾಜ್ಯಪಾಲರನ್ನು ಒತ್ತಾಯಿಸಿದ ನಂತರ ಚಂಪೈ ಸೊರೆನ್ ಅವರನ್ನು ಗುರುವಾರ ಮುಖ್ಯಮಂತ್ರಿ ಹುದ್ದೆಗೆ ನೇಮಿಸಲಾಯಿತು. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಬಂಧನದ ಬೆನ್ನಲ್ಲೇ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ನಾಯಕ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿ ಮಾಡಲಾಗಿದೆ.