ನೂತನ ಪಕ್ಷದ ಮೂಲಕ ರಾಜಕೀಯಕ್ಕೆ ತಮಿಳು ನಟ ದಳಪತಿ ವಿಜಯ್ ಎಂಟ್ರಿ

ಚೆನೈ: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಕಾಲಿಟ್ಟಿದ್ದು, ಅಂತಿಮವಾಗಿ ತಮ್ಮ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ ಅನ್ನು ಇಂದು ಪ್ರಾರಂಭಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ನಟ ವಿಜಯ್ “ನಾವು 2024 ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಜೊತೆಗೆ ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ನಾವು ಈ ನಿರ್ಧಾರವನ್ನು ಸಾಮಾನ್ಯ ಹಾಗೂ ಕಾರ್ಯಕಾರಿ ಮಂಡಳಿ ಸಭೆಗಾಗಿ ಮಾಡಿದ್ದೇವೆ” ಎಂದರು.

ಇನ್ನು ನಟ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷರಾಗಿರುತ್ತಾರೆ. ಅವರು ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಈ ಮೂಲಕ ತಮಿಳು ಸಿನಿಮಾ ರಂಗದಲ್ಲಿ ಹಾಗೂ ರಾಜಕೀಯದಲ್ಲಿ ಹೊಸ ತಿರುವು ಪಡೆದುಕೊಳ್ಳಲಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement