ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ, ಹಲವರು ಸಿಲುಕಿರುವ ಶಂಕೆ, 25ಕ್ಕೂ ಹೆಚ್ಚು ಮಂದಿಗೆ ಗಾಯ

ಮಧ್ಯಪ್ರದೇಶ: ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದ್ದು, ಸುಮಾರು 25 ಜನರು ಗಾಯಗೊಂಡಿದ್ದು, ಹಲವರು ಕಾರ್ಖಾನೆ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಗಾಯಾಳುಗಳನ್ನು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಪೋಟದ ಪರಿಣಾಮ ಕಾರ್ಖಾನೆ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

Advertisement

ಸ್ಫೋಟದಿಂದ ಭೀಕರವಾದ ಬೆಂಕಿ ಹೊತ್ತಿಕೊಂಡಿದ್ದು, ಕಾರ್ಖಾನೆ ಮಾತ್ರವಲ್ಲದೆ ಸುತ್ತಮುತ್ತಲಿನ ಕಟ್ಟಡಗಳನ್ನೂ ಆವರಿಸಿದೆ. ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಆಕಾಶದೆತ್ತರಕ್ಕೆ ಮುಟ್ಟುವುದು ವೈರಲ್ ಆದ ವಿಡಿಯೋದಲ್ಲಿ ಕಾಣಬಹುದಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement