ಬೆಂಗಳೂರು: ವಿಧಾನಸಭೆ ಸಭೆ ಚುನಾವಣೆ ಬಳಿಕ ಅಮಿತ್ ಶಾ ಅವರ ಇದೇ ಮೊದಲ ರಾಜ್ಯ ಪ್ರವಾಸವಾಗಿದೆ. ಇದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಫೆ.11 ರಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅಲ್ಲಿಂದ 11.45ಕ್ಕೆ ಹೆಲಿಕಾಪ್ಟರ್ನಲ್ಲಿ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳಸಲಿದ್ದು, ಸುತ್ತೂರು ಜಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಅದೇ ದಿನ ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಅದನ್ನು ಮುಗಿಸಿಕೊಂಡು ಮಧ್ಯಾಹ್ನ 2.30ಕ್ಕೆ ರಾಡಿಸನ್ ಬ್ಲೂ ಹೋಟೆಲ್‌ಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.!