ತಿರಸ್ಕೃತಗೊಂಡ ಬೆಳೆವಿಮೆಗಳ ಆಕ್ಷೇಪಣೆಗೆ ಆಹ್ವಾನ : ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ 2022-23ನೇ ಸಾಲಿನ ಮುಂಗಾರು, ಹಿಂಗಾರು ಹಂಗಾಮಿನಲ್ಲಿ ಬೆಳೆ ಹೊಂದಾಣಿಕೆಯಾಗದೇ ವಿಮಾ ಸಂಸ್ಥೆಯಿಂದ ತಿರಸ್ಕೃತ ಗೊಂಡ ಪ್ರಸ್ತಾವನೆಗೆ ಯಾವುದಾದರೂ ಅಕ್ಷೇಪಣೆಗಳಿ ದ್ದಲ್ಲಿ ಫೆ. 26ರರೊಳಗೆ ತಮ್ಮ ಮನವಿ ಸಲ್ಲಿಸಬಹು ದಾಗಿದೆ ಎಂದು ತಾ.ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸಪ್ಪ ಕೆ.ಎಚ್. ತಿಳಿಸಿದರು.
ಪಟ್ಟಣದ ಕೃಷಿ ಇಲಾಖೆಯ ಕಚೇರಿಯಲ್ಲಿ ಮಾತನಾಡಿದ ಅವರು, ತಾಲೂಕು ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ 2022-23ನೇ ಸಾಲಿನ ಮುಂಗಾರು, ಹಿಂಗಾರು ಹಾಗೂ ಹಂಗಾಮಿನಲ್ಲಿ ಬೆಳೆ ದತ್ತಾಂಶವನ್ನು ಬೆಳೆ ನೋಂದಣಿಯಾದ ಪ್ರಸ್ತಾವನೆ ಗಳೊಂದಿಗೆ ಹೋಲಿಕೆ ಮಾಡಿ ತಾಳೆಯಾಗದೇ ಇರುವ ಪ್ರಸ್ತಾವನೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳಿಂದ ಪರಿಶೀಲಿಸಿ, ವಿವರಗಳನ್ನು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಗಳು, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ತಾಲೂಕು ಕಚೇರಿ, ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕರ ಕಚೇರಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ರೈತರು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ 2024 ರ ಫೆ. 26ರೊಳಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ತಮ್ಮ ಮನವಿ ಸಲ್ಲಿಸಬಹುದಾಗಿದೆ ಎಂಬ ಮಾಹಿತಿ ನೀಡಿದರು.