ಇಸ್ಲಾಮಾಬಾದ್: ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಶೆಹಬಾಜ್ ಷರೀಫ್ ಅವರನ್ನು ಪಾಕಿಸ್ತಾನದ ಪ್ರಧಾನಿ ಹುದ್ದೆಗೆ ಅವರ ಪಕ್ಷವು ಮಂಗಳವಾರ ರಾತ್ರಿ ನಾಮನಿರ್ದೇಶನ ಮಾಡಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪಿಎಂಎಲ್-ಎನ್ ವಕ್ತಾರ ಮರ್ಯಮ್ ಔರಂಗಜೇಬ್ ಅವರು ಮಾಹಿತಿ ನೀಡಿದ್ದಾರೆ. ಪಿಎಂಎಲ್-ಎನ್ ಪಕ್ಷದ ವರಿಷ್ಠರಾದ ನವಾಜ್ ಷರೀಫ್ (74) ಅವರು ತಮ್ಮ ಕಿರಿಯ ಸಹೋದರ ಶೆಹಬಾಜ್ ಷರೀಫ್ (72) ಅವರನ್ನು ಪ್ರಧಾನಿ ಹುದ್ದೆಗೆ ಹಾಗೂ ಪುತ್ರಿ ಮರ್ಯಮ್ ನವಾಜ್ (50) ಅವರನ್ನು ಪಂಜಾಬ್ ಮುಖ್ಯಮಂತ್ರಿ ಹುದ್ದೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಪಿಎಂಎಲ್-ಎನ್ ಬೆಂಬಲಿಸುವ ರಾಜಕೀಯ ಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ನವಾಜ್ ಷರೀಫ್ ಅವರು ಅಂತಹ ನಿರ್ಧಾರಗಳು ಪಾಕಿಸ್ತಾನವನ್ನು ಬಿಕ್ಕಟ್ಟಿನಿಂದ ಹೊರತರುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಿಎಂಎಲ್-ಎನ್ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಪ್ರಯತ್ನಿಸುತ್ತದೆ ಎಂದು ಘೋಷಿಸಿದೆ.