ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದೇ 370 ಸ್ಥಾನಗಳನ್ನು ಗೆಲ್ಲಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದೇ 370 ಸ್ಥಾನಗಳನ್ನು ಗೆಲ್ಲಲಿದ್ದು, ಎನ್‌ಡಿಎ ಒಟ್ಟು 400 ಸ್ಥಾನಗಳಲ್ಲಿ ಜಯ ಸಾಧಿಸಲಿದೆ. ಇದು ಸಾಧ್ಯವಾದರೆ ಮಾತ್ರ ಪಕ್ಷದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿಯವರಿಗೆ ನೈಜ ಶ್ರದ್ಧಾಂಜಲಿ ಸಲ್ಲಿಸಿದಂತೆ ಆಗಲಿದೆ ಎಂದರು.
ಜಮ್ಮು-ಕಾಶ್ಮೀರಕ್ಕೆ ಸ್ವಾಯತ್ತ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಮುಖರ್ಜಿಯವರು ತೀವ್ರವಾಗಿ ವಿರೋಧಿಸುತ್ತಿದ್ದು, ಮೋದಿ ಸರಕಾರ 2019 ರಲ್ಲಿ ಇದನ್ನು ರದ್ದು ಮಾಡಿತ್ತು.