ಬೆಂಗಳೂರು: ನಟ ಧ್ರುವ ಸರ್ಜಾ ಹಾಗೂ ಅವರ ‘ಮಾರ್ಟಿನ್’ ಸಿನಿಮಾ ತಂಡದವರು ವಿಮಾನ ದುರಂತದಿಂದ ಪಾರಾಗಿರುವ ಬಗ್ಗೆ ಧ್ರುವ ಸರ್ಜಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಮಾರ್ಟಿನ್’ ಸಿನಿಮಾದ ಹಾಡಿನ ಚಿತ್ರೀಕರಣಕ್ಕಾಗಿ ಚಿತ್ರತಂಡದವರ ಜೊತೆ ಧ್ರುವ ಸರ್ಜಾ ಅವರು ಶ್ರೀನಗರಕ್ಕೆ ತೆರಳಿದ್ದು, ಅಲ್ಲಿ ಶೂಟಿಂಗ್ ಮುಗಿಸಿಕೊಂಡು ದೆಹಲಿಗೆ ವಾಪಸ್ ಬರುವಾಗ ವಿಮಾನದಲ್ಲಿ ತೊಂದರೆ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಇನ್ನು ಪೈಲಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದ್ದು, ಕ್ರ್ಯಾಶ್ ಆಗಬೇಕಿದ್ದ ಫ್ಲೈಟ್ ಕೂದಲೆಳೆ ಅಂತರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ಇಂಡಿಗೋ ವಿಮಾನದಲ್ಲಿ ‘ಮಾರ್ಟಿನ್’ ಚಿತ್ರತಂಡದವರು ವಿಡಿಯೋ ಮಾಡಿದ್ದಾರೆ.