ರಾಜ್ಯದ ರೈತರ ಏಳಿಗೆಗಾಗಿ ಸಿದ್ದು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ರೈತ ಸಿರಿ ಯೋಜನೆ ಪ್ರಮುಖವಾದುದು.
ಸಿರಿಧಾನ್ಯ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಜಾರಿಗೆ ತಂದಿರುವ ಯೋಜನೆ ಇದಾಗಿದ್ದು, ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ಪ್ರೋತ್ಸಾಹ ಧನವನ್ನು 2 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ ರೈತರ
ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.
ಮೊದಲ ಕಂತಿನಲ್ಲಿ 6,000, 2ನೇ ಕಂತಿನಲ್ಲಿ 4,000 ಹಣ ನಿಮ್ಮ ಖಾತೆಗೆ ಜಮೆ ಆಗಲಿದೆ.