ಟೈಯರ್ ಸ್ಫೋಟಗೊಂಡು ಬುಲೆರೋ ಟೆಂಪೋ ಪಲ್ಟಿ – 3 ಸಾವು, 6 ಮಂದಿ ಗಂಭೀರ

ದಾವಣಗೆರೆ: ಟೈಯರ್ ಸ್ಫೋಟಗೊಂಡು ಬುಲೆರೋ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಜನ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆ ನಗರದ ಹೊರವಲಯದ ಪಂಜಾಬಿ ಡಾಬಾ ಬಳಿಯ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಆಂಧ್ರದ ಮಂತ್ರಾಲಯಂ ತಾಲೂಕಿನ ಸಿಂಗರಾಜನಹಳ್ಳಿ ಗ್ರಾಮದ ನಿವಾಸಿಗಳಾದ ಮುಸ್ತಾನ್ (50), ಎಸ್.ಟಿ ವೀರಣ್ಣ (30), ಪೆದ್ದ ವೆಂಕಣ್ಣ (38) ಮೃತ ದುರ್ದೈವಿಗಳು. ಅಪಘಾತದಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿಯಿಂದ ಮೆಣಸಿಕಾಯಿ ತೆಗೆದುಕೊಂಡು ತಡರಾತ್ರಿ ವಾಪಸ್ ತಮ್ಮೂರಿಗೆ ಹೋಗುವಾಗ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಈ ಕುರಿತು ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement