ನವದೆಹಲಿ: ಲೋಕಸಭೆ ಚುನಾವಣೆ ಸಂದರ್ಭ ಜಾತಿ, ಧರ್ಮ ಮತ್ತು ಭಾಷೆಗಳ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಕೇಳಬೇಡಿ ಎಂದು ಕೇಂದ್ರ ಚುನಾವಣಾ ಆಯೋಗವು ಎಲ್ಲ ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಚುನಾವಣಾ ಆಯೋಗವು ದೇವಸ್ಥಾನ, ಮಸೀದಿ, ಚರ್ಚ್ ಮತ್ತು ಗುರುದ್ವಾರ ಸೇರಿದಂತೆ ಧಾರ್ಮಿಕ ಸ್ಥಳಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ. ನೀತಿಸಂಹಿತೆ ಉಲ್ಲಂಘಿಸಿದರೆ ಅಭ್ಯರ್ಥಿಗಳು ಮತ್ತು ಪ್ರಚಾರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.’ ಎಂದು ಎಚ್ಚರಿಸಿದೆ.
ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ‘ಪ್ರತಿಸ್ಪರ್ಧಿಗಳನ್ನು ನಿಂದಿಸುವ, ಅವಮಾನಿಸುವ, ಕೆಟ್ಟ ಅಭಿರುಚಿಯ ಮತ್ತು ಘನತೆಗೆ ಕುಂದು ತರುವ ಪೋಸ್ಟ್ಗಳನ್ನು ಮಾಡುವಂತಿಲ್ಲ’ ಎಂದು ತಿಳಿಸಿವೆ.