ಲೋಕಸಭೆ ಚುನಾವಣೆಗೆ 195 ಸ್ಪರ್ಧಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ
ಘೋಷಿಸಿದ್ದಾರೆ.
ಮೊದಲ ಪಟ್ಟಿಯಲ್ಲಿ 34 ಕೇಂದ್ರ ಮತ್ತು ರಾಜ್ಯ ಸಚಿವರು ಹಾಗೂ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಹೆಸರುಗಳಿವೆ.
ಕರ್ನಾಟಕದ ಯಾವ ಅಭ್ಯರ್ಥಿಯ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಿಲ್ಲ. 28 ಮಹಿಳೆಯರಿಗೆ, 50 ವರ್ಷದೊಳಗಿನ 47 ಮಂದಿಗೆ, 47 ಯುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.