ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.
ಒಟ್ಟು ಹುದ್ದೆಗಳ ಸಂಖ್ಯೆ
1000
ವೇತನ ಶ್ರೇಣಿ
21400-42000
ಪ್ರಮುಖ ದಿನಾಂಕಗಳು
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 04-03-2024ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-04-2024 ಆಗಿರುತ್ತದೆ. ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 06-04-2024.
ಶೈಕ್ಷಣಿಕ ವಿದ್ಯಾರ್ಹತೆ
ದ್ವಿತೀಯ ಪಿಯುಸಿ ಅಥವಾ ತತ್ಸಮಾನ
(ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 81 ಸೇವನೆ 2017, ದಿ: 27.02.2018 ರನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
ಸಿಬಿಎಸ್ಸಿ ಮತ್ತು ಐಸಿಎಸ್ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್ ಐ ಓ ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್.ಎಸ್.ಸಿ.
ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್
ವಯೋಮಿತಿ
ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.