ಲಕ್ನೋ: ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಬಾರಾಬಂಕಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರ ಅಶ್ಲೀಲ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಂಸದ ಉಪೇಂದ್ರ ಸಿಂಗ್ ರಾವತ್ ವಿದೇಶಿ ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಏಕಾಂತವಾಗಿ ಕುಳಿತಿರುವುದನ್ನು ವೈರಲ್ ವಿಡಿಯೋದಲ್ಲಿ ಕಾಣಬಹುದಾಗಿದೆ. ಸಂಸದರ ಆಪ್ತ ಕಾರ್ಯದರ್ಶಿ ದಿನೇಶ್ ಚಂದ್ರ ರಾವತ್ ಅವರ ದೂರಿನ ಆಧಾರದ ಮೇಲೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಸಂಸದರನ್ನು ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ ನಂತರ ಅವರ ವರ್ಚಸ್ಸು ಹಾಳು ಮಾಡಲು ಕೆಲವರು ಅವರ ಆಕ್ಷೇಪಾರ್ಹ ವಿಡಿಯೋವನ್ನು ಸಾರ್ವಜನಿಕಗೊಳಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಆದಿತ್ಯ ತ್ರಿಪಾಠಿ ತಿಳಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿಯು ಆಗಿನ ಹಾಲಿ ಸಂಸದ ಪ್ರಿಯಾಂಕಾ ಸಿಂಗ್ ರಾವತ್‌ಗೆ ಟಿಕೆಟ್ ನಿರಾಕರಿಸಿ ಉಪೇಂದ್ರ ಸಿಂಗ್ ರಾವತ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಮಾಡಿತ್ತು.