ನೀರವ್ ಮೋದಿ, ವಿಜಯ್ ಮಲ್ಯ ಜೊತೆ ಮೋದಿ ಚಿತ್ರವಿರುವ ಪೋಸ್ಟರ್‌- ಎಫ್ಐಆರ್ ದಾಖಲು

ನವದೆಹಲಿ: ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವಿರುವ ಪೋಸ್ಟರ್‌ಗಳು ಕೇಂದ್ರ ದೆಹಲಿಯ ಹಲವು ಭಾಗಗಳಲ್ಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಪೋಸ್ಟರ್‌ನಲ್ಲಿ ‘ಮೋದಿ ಕಾ ಅಸಲಿ ಪರಿವಾರ್’ (ಮೋದಿಯವರ ನಿಜವಾದ ಕುಟುಂಬ) ಎಂಬ ಶೀರ್ಷಿಕೆಯನ್ನು ಹೊಂದಿದ್ದು, ಕೆಳಭಾಗದಲ್ಲಿ ‘ಭಾರತೀಯ ಯುವ ಕಾಂಗ್ರೆಸ್’ ಎಂದು ಬರೆಯಲಾಗಿದೆ.

ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ದೆಹಲಿ ಆಸ್ತಿ ವಿರೂಪಗೊಳಿಸುವಿಕೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಮತ್ತು ಸದ್ಯ ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ನವದೆಹಲಿ ಮುನ್ಸಿಪಲ್ ಕೌನ್ಸಿಲ್‌ನ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement