ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ

ನವದೆಹಲಿ: ಕೇಂದ್ರ ಸರ್ಕಾರ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಜಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement