ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಆಗಿದ್ದು, ನೀತಿ ಸಂಹಿತೆಯೂ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಭೆ, ಸಮಾರಂಭಗಳಿಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
ಲೋಕಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆ ಸಾರ್ವಜನಿಕರು ಯಾವುದೇ ಸಭೆ- ಸಮಾರಂಭ ಅಥವಾ ಕಾರ್ಯಕ್ರಮಗಳನ್ನು ನಡೆಸಿದರೆ ಅದಕ್ಕೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಜೊತೆಗೆ ಅಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆಗಳನ್ನು ಮಾಡಬಾರದು. ರಾಜಕೀಯ ಪಕ್ಷಗಳ ಬಾವುಟ, ಚಿಹ್ನೆಗಳನ್ನು ಬಳಸಬಾರದು ಹಾಗೂ ಮತಯಾಚಿಸುವುದು ಕೂಡ ಕಾನೂನು ಬಾಹಿರವಾಗಿದೆ.
ಕಾರ್ಯಕ್ರಮಗಳಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸುವುದು, ರಾಜಕೀಯ ಪಕ್ಷಗಳ ಬಾವುಟ, ಚಿಹ್ನೆಗಳನ್ನು ಬಳಸುವುದು, ಮತಯಾಚಿಸುವುದು ಕಾನೂನು ಬಾಹಿರವಾಗಿದೆ. ಮತದಾರರಿಗೆ ಭರವಸೆ, ಆಮಿಷ ಒಡ್ಡುವ ಕುರಿತು ದೂರು ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.