ಪಾಟ್ನಾ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಬಿದ್ದಿದೆ. ಅವಘಡದಲ್ಲಿ ಓರ್ವ ಮೃತಪಟ್ಟಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಘಟನೆ ಬಿಹಾರದ ಸುಪೌಲ್ನಲ್ಲಿ ನಡೆದಿದೆ.
ಇನ್ನೂ 30 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಕಾರ್ಮಿಕರನ್ನು ಹೊರತರುವ ಕಾರ್ಯ ನಡೆಯುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ಸ್ಥಳೀಯರ ನೆರವು ಪಡೆಯಲಾಗುತ್ತಿದೆ.