ಮತ್ತೆ ಬಿಜೆಪಿ ಸೇರಿದ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ರಾಜ್ಯಾಧ್ಯಕ್ಷ, ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೋಮವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್​​.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ತಮ್ಮ ಪಕ್ಷವನ್ನೂ ಬಿಜೆಪಿ ಜೊತೆ ವಿಲೀನ ಮಾಡಿದ್ದಾರೆ. ಮಾ.24 ರಾಜ್ಯ ಬಿಜೆಪಿ ನಾಯಕರೊಂದಿಗೆ ನಡೆದ ಸಭೆಯಲ್ಲಿ ಬಿಜೆಪಿಗೆ ಸೇರಲು ಜನಾರ್ದನ ರೆಡ್ಡಿ ಒಪ್ಪಿಕೊಂಡಿದ್ದರು

“ಪಕ್ಷ ಸೇರ್ಪಡೆ ಬಳಿಕ ವಿಜಯೇಂದ್ರ ಮಾತನಾಡಿ, “ಜನಾರ್ದನ ರೆಡ್ಡಿ ಬಿಜೆಪಿಗೆ ಮರುಸೇರ್ಪಡೆಯಾಗಿರುವುದರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ. ಪ್ರಧಾನಿ ಮೋದಿ ನಾಯಕತ್ವವನ್ನು ಮೆಚ್ಚಿ, ಬಿಜೆಪಿ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಮರು ಸೇರ್ಪಡೆ ಆಗಿದ್ದಾರೆ. ಇದು ಬಹಳ ಸಂತೋಷ ತರುವಂತಹ ಸಂಗತಿ ಇದಾಗಿದೆ” ಎಂದರು.

Advertisement

ದೇಶದ ಸಮಗ್ರತೆ ಅಭಿವೃದ್ಧಿಗೆ ಕೆಲಸ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಲ್ಲಿಗೆ ಆಹ್ವಾನಿಸಿ ಬಿಜೆಪಿಗೆ ಬಂದು ಕೆಲಸ ಮಾಡಬೇಕು ಎಂಬ ಆಹ್ವಾನ ಒಪ್ಪಿ ಪಕ್ಷ ಸೇರ್ಪಡೆ ಆಗಿದ್ದೇನೆ ಎಂದರು.

 

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement