ಚೆನ್ನೈ : ಗೌತಮ್ ವಾಸುದೇವ್ ಮೆನನ್ ಅವರ ‘ ಕಾಖ ಕಾಖ ‘ ಚಿತ್ರದಲ್ಲಿ ಸೂರ್ಯ ಜೊತೆಗಿನ ಪಾತ್ರಕ್ಕೆ ಹೆಸರುವಾಸಿಯಾದ ತಮಿಳು ನಟ ಡೇನಿಯಲ್ ಬಾಲಾಜಿ ಮಾ. 29 ರಂದು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರು ತಮ್ಮ 48 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಡೇನಿಯಲ್ ತೀವ್ರ ಎದೆನೋವಿನಿಂದ ಚೆನ್ನೈನ ಕೊಟ್ಟಿವಾಕಂನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅಲ್ಲಿಯೇ ಕೊನೆಯುಸಿರೆಳೆದರು. ಅಂತ್ಯಕ್ರಿಯೆಯನ್ನು ಶನಿವಾರ ನಿಗದಿಪಡಿಸಲಾಗಿದ್ದು, ಅವರ ಪಾರ್ಥಿವ ಶರೀರವನ್ನು ಪುರಸೈವಾಲ್ಕಮ್ನಲ್ಲಿರುವ ಅವರ ನಿವಾಸದಲ್ಲಿಇಡಲಾಗಿದ್ದು ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಡ್ಯಾನಿಯಲ್ ಬಾಲಾಜಿ ಅವರು ಅವರು ಪ್ರೊಡಕ್ಷನ್ ಮ್ಯಾನೇಜರ್ ಆಗಿ ಬಣ್ಣದ ಲೋಕದ ಜೊತೆ ನಂಟು ಬೆಳೆಸಿಕೊಂಡರು. ಅವರು ಕಮಲ್ ಹಾಸನ್ ಅವರ ಹಿಸ್ಟಾರಿಕ್ ಡ್ರಾಮಾ ‘ಮರುಢನಯಗಂ’ ಸಿನಿಮಾದಲ್ಲಿ ಪ್ರೊಡಕ್ಷನ್ ಮ್ಯಾನೇಜರ್ ಆಗಿದ್ದರು. ಈ ಸಿನಿಮಾ ಅರ್ಧಕ್ಕೆ ನಿಂತಿತು. ಡ್ಯಾನಿಯಲ್ ಬಾಲಾಜಿ ಅವರು ‘ಚಿತ್ತಿ’ ಹೆಸರಿನ ಧಾರಾವಾಹಿಯಲ್ಲೂ ನಟಿಸಿದ್ದರು. ಅದರಲ್ಲಿ ಅವರು ಡ್ಯಾನಿಯಲ್ ಪಾತ್ರವನ್ನು ನಿರ್ವಹಿಸಿದರು. ಅಲ್ಲಿಂದ ಅವರು ಡ್ಯಾನಿಯಲ್ ಬಾಲಾಜಿ ಎಂಬ ಹೆಸರು ಗಳಿಸಿದರು.
ತಮಿಳು ಮಾತ್ರವಲ್ಲದೆ ತೆಲುಗು, ಕಿರಾತಕ ಸೇರಿ ಕನ್ನಡ ಮತ್ತು ಮಲಯಾಳಂ ಚಿತ್ರಗಳಲ್ಲಿಯೂ ಡ್ಯಾನಿಯಲ್ ಬಾಲಾಜಿ ನಟಿಸಿದ್ದರು.