ರಾಯಚೂರು: ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಶನಿವಾರ (ಮಾರ್ಚ್ 30) ರಂದು ಅತ್ಯಧಿಕ 44.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಕಲಬುರಗಿ, ರಾಯಚೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ಬೀದರ್, ಬಾಗಲಕೋಟೆ, ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 42 ಡಿಗ್ರಿ ಸೆಲ್ಸಿಯಸ್ನಿಂದ 44.3 ಡಿಗ್ರಿ ಸೆಲ್ಸಿಯಸ್ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.