ಇಂದು 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ.!

 

ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಸೋಮವಾರ ಆಯಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.

2023 -24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಕಳೆದ ಮಾರ್ಚ್ ನಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸಲಾಗಿದ್ದು, ಬ್ಲಾಕ್ ಹಂತದಲ್ಲಿ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ ಉತ್ತರ ಪತ್ರಿಕೆಗಳ ಸಹಿತ ಶಾಲಾ ವಿದ್ಯಾರ್ಥಿಗಳ ಅಂಕಗಳನ್ನು ದಾಖಲಿಸಿ ಪ್ರತಿಯನ್ನು ಆಯಾ ಶಾಲೆಗಳಿಗೆ ಕಳುಹಿಸಲಾಗಿದೆ.

Advertisement

ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ಸೋಮವಾರ ಶಾಲಾ ಹಂತದಲ್ಲಿ ಫಲಿತಾಂಶ ಪ್ರಕಟಿಸಿ ಫಲಿತಾಂಶ ಪ್ರಕಟಿಸಿರುವ ಬಗ್ಗೆ ಜಿಲ್ಲಾ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಂಡಳಿ ಕಚೇರಿಗೆ ಮಾಹಿತಿ ನೀಡಬೇಕೆಂದು ಹೇಳಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement