ಕಾಶ್ಮೀರ:ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾಕ ಸಾವನ್ನಪ್ಪಿದ್ದಾನೆ.
ಪುಲ್ವಾಮಾ ಜಿಲ್ಲೆಯ ಅರ್ಶಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಸುಳಿವು ಪಡೆದ ಭದ್ರತಾ ಪಡೆಗಳು ಕೂಡಲೇ ಶೋಧ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಭದ್ರತಾ ಪಡೆಗಳ ಪ್ರತಿ ದಾಳಿಗೆ ಓರ್ವ ಭಯೋತ್ಪಾದಕ ಮೃತಪಟ್ಟಿದ್ದಾನೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅಲ್ಲದೇ ಘಟನೆಯಲ್ಲಿ ಮತ್ತೊಬ್ಬ ಭಯೋತ್ಪಾದಕ ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.