ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಮ್ ಬ್ರ್ಯಾಂಚ್ ಪೊಲೀಸರು ಇಬ್ಬರು ಆರೋಪಿಗಳನ್ನು ಗುಜರಾತ್ ನ ಭುಜ್ ನಲ್ಲಿ ಸೋಮವಾರ ಬಂಧಿಸಿದ್ದಾರೆ.
ವಿಕ್ಕಿ ಗುಪ್ತಾ ಹಾಗೂ ಸಾಗರ್ ಪಾಲ್ ಬಂಧಿತರು.
ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇದೀಗ ಅವರ ವಿಚಾರಣೆ ಬಳಿಕ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಜೊತೆಗೆ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಮುಂಬೈಗೆ ಕರೆತರಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ಇಬ್ಬರು ಆರೋಪಿಗಳು ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಅಪಾರ್ಟ್ಮೇಲೆ ಗುಂಡು ಹಾರಿಸಿದ್ದರು. ಆ ಬಳಿಕ ಆರೋಪಿಗಳು ಮುಂಬೈ ಬಿಟ್ಟು ಪರಾರಿಯಾಗಿದ್ದರು. ಇನ್ನು ಆರೋಪಿಗಳ ಹಿಂದೆ ಯಾರಿದ್ದಾರೆ ಎಂಬ ವಿಚಾರ ವಿಚಾರಣೆ ಬಳಿಕವಷ್ಟೇ ತಿಳಿದುಬರಬೇಕಿದೆ.