ಬೀದರ್: ಮಾಜಿ ಶಾಸಕ ರಮೇಶ್ ಕುಮಾರ್ ಪಾಂಡೆ (78) ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಕೆಲ ದಿನಗಳ ಹಿಂದಷ್ಟೇ ಬೀದರ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ವೈದ್ಯರ ಸಲಹೆ ಮೇರೆಗೆ ನಂತರ ಅವರನ್ನು ಮನೆಗೆ ಕರೆದುಕೊಂಡು ಹೋಗಲಾಗಿತ್ತು. ಬೀದರ್ ನಗರಸಭೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಪಾಂಡೆ 1999ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು.