23 ರಂದು ಚುನಾವಣಾ ಹಿನ್ನೆಲೆ ಪ್ರಿಯಾOಕಾ ಗಾಂಧಿ ದುರ್ಗಕ್ಕೆ

 

ಚಿತ್ರದುರ್ಗ: ಪ್ರಥಮ ಬಾರಿಗೆ ಇಂದಿರಾಗಾoಧಿ ಮೊಮ್ಮಗಳು, ಭಾರತದ ಭವಿಷ್ಯದ ನಾಯಕಿ ಪ್ರಿಯಾಂಕಾ ಗಾಂಧಿ ಚಿತ್ರದುರ್ಗ ಜಿಲ್ಲಾ ಕೇಂದ್ರಕ್ಕೆ ಏ.23ರಂದು ಆಗಮಿಸುತ್ತಿದ್ದು, ಅವರನ್ನು ನೋಡಲು, ಅವರ ಭಾಷಣ ಕೇಳುವ ಕುತೂಹಲ ಸಹಜವಾಗಿ ಜನರಲ್ಲಿ ಹೆಚ್ಚು ಇದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಕಾರ್ಯಕ್ರಮದ ಸಿದ್ಧತಾ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಅಂದು ಮಧ್ಯಾಹ್ನ 2.30 ಗಂಟೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಆಯೋಜಿಸಿರುವ ಪ್ರಚಾರ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡು ಭಾಷಣ ಮಾಡಲಿದ್ದಾರೆ ಎಂದರು.

Advertisement

ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸುವ್ಯವಸ್ಥಿತವಾಗಿ ನಡೆಸಲು ಸಿದ್ಧತೆ ಭರದಿಂದ ಸಾಗುತ್ತಿದೆ. 25 ಸಾವಿರ ಆಸನಗಳನ್ನು ಹಾಕಿಸಲಾಗಿದೆ. ಜೊತೆಗೆ ಜಿಲ್ಲೆಯ ವಿವಿಧ ತಾಲೂಕು, ಹಳ್ಳಿಗಳಿಂದ ಜನರೇ ಸ್ವಯಂ ಪ್ರೇರಿತರಾಗಿ ಬಸ್ ಇತರ ವಾಹನಗಳನ್ನು ಮಾಡಿಕೊಂಡು ಇಂದಿರಾಗಾAಧಿ ಮೊಮ್ಮಗಳನ್ನು ಕಣ್ತುಂಬಿಕೊಳ್ಳಲು ಬರುತ್ತಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಡುವ ಜವಾಬ್ದಾರಿ ನಮ್ಮದು. ಆದ್ದರಿಂದ ಅಚ್ಚುಕಟ್ಟು ಕಾರ್ಯಕ್ರಮಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ನಾಡಿನ ಜನತೆಗೆ ಇಂದಿರಾಗಾAಧಿ ಮತ್ತು ಅವರ ಕುಟುಂದ ಜೊತೆಗೆ ಭಾವನಾತ್ಮಕ ಸಂಬAಧ ಇದೆ. ಉಳುವವನೆ ಒಡೆಯ, ಬ್ಯಾಂಕ್‌ಗಳ ರಾಷ್ಟಿçÃಕರಣ, ಗರೀಭಿ ಹಠಾವ್ ಹೀಗೆ ಬಡವರ ಪರ ನೂರಾರು ಕಾರ್ಯಕ್ರಮ ಕೊಟ್ಟ ಇಂದಿರಾಗಾAಧಿಯನ್ನು ನಾಡಿನ ಜನರು ತಾಯಿ ಸ್ಥಾನದಲ್ಲಿಟ್ಟಿದ್ದಾರೆ. ದೇಶಕ್ಕೆ ಕಂಪ್ಯೂಟರ್ ಪರಿಚಯಿಸಿದ ರಾಜೀವ್ ಗಾಂಧಿ ಆಧುನೀಕ ಭಾರತದ ನಿರ್ಮಾತೃ ಎಂದೇ ಪ್ರತಿ ಗಳಿಸಿದ್ದಾರೆ. ಆದ್ದರಿಂದ ಅವರ ಕುಟುಂಬದ ಕುಡಿ ಪ್ರಿಯಾಂಕಾ ಗಾಂಧಿಯ ಭಾಷಣ ಕೇಳಲು ಅಂದಾಜು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್,ಮುಖ0ಡರಾದ ಪ್ರಕಾಶ ರಾಮನಾಯ್ಕ, ಎನ್.ಡಿ.ಕುಮಾರ್, ಓ.ಶಂಕರ್, ಬಿ.ಪಿ.ಪ್ರಕಾಶಮೂರ್ತಿ, ಡಿ.ಎನ್.ಮೈಲಾರಪ್ಪ, ವಕೀಲ ಶರಣಪ್ಪ, ರವಿಕುಮಾರ್ ಇತರರಿದ್ದರು.

 

 

 

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement