ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇ ಬೇಕು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಪ್ರಜ್ವಲ್ ರೇ ವಣ್ಣ ನೂರಾರು ಮಹಿಳೆಯರ ಮೇ ಲೆ ಲೈಂ ಗಿಕ ದೌರ್ಜ ನ್ಯ ನಡೆಸಿರುವ ಆರೋ ಪದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಆರೋಪದ ಕುರಿತು ತನಿಖೆಗೆ ಮುಖ್ಯಮಂತ್ರಿಯವರು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವುದು ಗಮನಕ್ಕೆ ಬಂದಿದೆ. ಎಸ್ಐಟಿ ತನಿಖೆ ಪೂರ್ಣ ಗೊಳ್ಳಲಿ. ಸತ್ಯಾಂಶ ಏನು ಎಂಬುದು ಹೊರಬರಲಿ ಎಂದರು.
ಈ ನೆಲದ ಕಾನೂನಿನಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ತಪ್ಪು ಮಾಡಿದವರನ್ನು ನಾವು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ನಾನಾಗಲೀ , ಎಚ್.ಡಿ. ದೇವೇ ಗೌಡರಾಗಲೀ ಸಂಕಷ್ಟ ಹೇಳಿಕೊಂಡು ಬಂದ ಮಹಿಳೆಯರನ್ನು ಅತ್ಯಂತ ಗೌರವದಿಂದ ನಡೆಸಿಕೊಂಡಿದ್ದೇವೆ. ಮಹಿಳೆಯರ ಬಗ್ಗೆ ಸದಾ ಗೌರವದ ಭಾವನೆ ಹೊಂದಿದ್ದೇವೆ ಎಂದು ಹೇಳಿದರು.
ಪ್ರಜ್ವಲ್ ವಿದೇಶಕ್ಕೆ ಪರಾರಿಯಾಗಿರುವ ಕುರಿತು ಪ್ರಶ್ನಿಸಿದಾಗ, ʼಪ್ರಜ್ವಲ್ ವಿದೇಶಕ್ಕೆ ಹೋಗಿದ್ದರೋ ಅದಕ್ಕೂ ನನಗೂ ಸಂಬಂಧ ಇಲ್ಲ. ಅವರು ತಪ್ಪಿಸಿಕೊಂಡಿದ್ದರೆ ಎಸ್ಐಟಿ ಅಧಿಕಾರಿಗಳು ಪತ್ತೆಹಚ್ಚಿ ಕರೆತರಲಿ. ಅದಕಾಗಿಯೇ ನೇಮಿಸಿರುವ ಅಧಿಕಾರಿಗಳಿದ್ದಾರೆ ಎಂದರು.