ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಿದ್ದಾರೆ.
ಎಸಿ,ಎಸ್ಟಿ, ಒಬಿಸಿ ಮೀಸಲಾತಿ ತೆಗೆದು ಹಾಕಲಾಗುವುದು ಎಂದು ವಿಡಿಯೋವನ್ನು ತಿರುಚಲಾಗಿದೆ. ಅಮಿತ್ ಶಾ ಅವರ ಹೇಳಿಕೆಯನ್ನು ತಿರುಚಿ ವಿಡಿಯೋ ಮಾಡಲಾಗಿದೆ ಎನ್ನಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ದೆಹಲಿ ಪೊಲೀಸರು ಪ್ರಕರಣ ಸಂಬಂಧ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್ ನೀಡಲಾಗಿದೆ. ಮೇ 1ರಂದು ವಿಚಾರಣೆಗೆ ಬರುವಂತೆ ದೆಹಲಿ ಪೊಲೀಸರು ರೇವಂತ್ ರೆಡ್ಡಿ ಅವರಿಗೆ ತಿಳಿಸಿದ್ದಾರೆ. ಹಾಗೂ ಅವರು ಬಳಸಿದ ಎಲ್ಲಾ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಅವರೊಂದಿಗೆ ತರುವಂತೆ ಸೂಚಿಸಿದ್ದಾರೆ.
ಅಮಿತ್ ಶಾ ಅವರ ಭಾಷಣವನ್ನು ತಿರುಚಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಪ್ರಕರಣ ಸಂಬಂಧ ಕೆಲ ಕಾಂಗ್ರೆಸ್ ನಾಯಕರು ಸೇರಿದಂತೆ ಇನ್ನೂ 5 ಮಂದಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಲಿದ್ದಾರೆ ಎಂದು ತಿಳಿದುಬಂದಿದೆ.