ದುಬೈ: ಯುಎಇಯ ದುಬೈನಲ್ಲಿರುವ ಅಲ್ಮಖ್ತೂಮ್ ಇಂಟರ್ನ್ಯಾಷನಲ್ ಏರ್ಪೋರ್ಟ್ ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣವಾಗಿ ನಿರ್ಮಾಣವಾಗಲಿದೆ.
ದುಬೈನ ಈ 2ನೇ ಏರ್ಪೋರ್ಟ್ ನಲ್ಲಿ ಹೊಸ ಟರ್ಮಿನಲ್ ತಯಾರಾಗುತ್ತಿದೆ. ಈ ಟರ್ಮಿನಲ್ ಅಂದಾಜು 35 ಬಿಲಿಯನ್ ಡಾಲರ್ ವೆಚ್ಚದಲ್ಲಿ ಸಿದ್ದಗೊಳ್ಳಲಿದೆ. ಹಾಗೂ ಇದು ವಿಶ್ವದಲ್ಲೇ ಅತಿದೊಡ್ಡ ಟರ್ಮಿನಲ್ ಆಗಿದೆ. ಈ ಟರ್ಮಿನಲ್ ನಲ್ಲಿ 400 ಗೇಟ್, 5 ರನ್ ವೇ ಇರಲಿವೆ.
ದುಬೈನ ದಕ್ಷಿಣ ಭಾಗದಲ್ಲಿರುವ ಮರುಭೂಮಿಯಲ್ಲಿ ಮುಂದಿನ 10 ವರ್ಷದಲ್ಲಿ ಈ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ವಿಶ್ವದ ಅತ್ಯಂತ ಬ್ಯುಸಿ ವಿಮಾನ ನಿಲ್ದಾಣಗಳಲ್ಲಿ ಒಂದಾಗಿರುವ ದುಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ ತನ್ನ ಇಡೀ ಕಾರ್ಯಾಚರಣೆಗಳನ್ನು ಈ ವಿಮಾನ ನಿಲ್ದಾಣಕ್ಕೆ ಸ್ಥಳಾಂತರಗೊಳಿಸಲಾಗುತ್ತದೆ.