ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ(91) ಅವರು ಅನಾರೋಗ್ಯದ ಹಿನ್ನೆಲೆ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಎಸ್ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಏಪ್ರಿಲ್ 22ರಂದು ಎಸ್ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಬಳಿಕ ಬಿಡುಗಡೆ ಹೊಂದಿದ್ದರು. ಆದರೆ ಇದೀಗ ಇಂದು ಮತ್ತೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಹಿನ್ನೆಲೆ ಮತ್ತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.