ಕೋಲ್ಕತ: ಪಶ್ಚಿಮ ಬಂಗಾಳದ ರಾಜಭವನವನ್ನು ಸ್ಫೋಟಿಸುವುದಾಗಿ ಕಿಡಿಗೇಡಿಗಳು ಕರೆ ಮಾಡಿ ಬೆದರಿಕೆಯೊಡ್ಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಿಡಿಗೇಡಿಗಳು ಕರೆ ಮಾಡಿ ನಾವು ಟೆರರೂಸರ್ಸ್ ಎಂಬ ಭಯೋತ್ಪಾದಕ ಗುಂಪಿನವರು. ನಿಮ್ಮ ಕಟ್ಟಡದ ಒಳಗೆ ಸ್ಫೋಟಕ ಸಾಧನಗಳನ್ನು ಇರಿಸಿದ್ದೇವೆ. ಅನೇಕ ಮಂದಿ ಮಂದಿ ಸಾಯುತ್ತಾರೆ, ರಕ್ತದ ಮಡುವಿನಲ್ಲಿ ಬೀಳುತ್ತೀರಿ ಎಂದು ಬೆದರಿಸಿದ್ದಾರೆ.
ಈ ಸಂದೇಶ ಕಳುಹಿಸಿದವರನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ. ಪಶ್ಚಿಮ ಬಂಗಾಳದ ರಾಜಭವನಕ್ಕೆ ಅಷ್ಟೇ ಅಲ್ಲದೇ ದೆಹಲಿಯ ಮದರ್ ಮೇರಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.